ಸೈಕಲ್ಗೆ ಡಿಕ್ಕಿ ಹೊಡೆದ ಬಸ್, ವೃದ್ಧ ಸ್ಥಳದಲ್ಲೇ ಸಾವು, ಸಿಸಿಟಿವಿಯಲ್ಲಿ ಸೆರೆ
ಸೈಕಲ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದ್ದು, ನೆಲಕ್ಕೆ ಬಿದ್ದ ವ್ಯಕ್ತಿಯ ತಲೆಯ ಮೇಲಿಂದ ಬಸ್ ಚಕ್ರ ಹರಿದಿದೆ. ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಹಾರಾಷ್ಟ್ರದಲ್ಲಿ ಆಘಾತಕಾರಿ ಅಪಘಾತ:
ಪುಣೆ ಪೋರ್ಷೆ ಕಾರು ಅಪಘಾತದ ನಂತರ, ಮತ್ತೊಂದು ಹಿಟ್ ಅಂಡ್ ರನ್ ಪ್ರಕರಣ ನಾಗ್ಪುರದಲ್ಲಿ ನಡೆದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೇಗವಾಗಿ ಬಂದ ಬಸ್ ಸೈಕಲ್ನಲ್ಲಿ ಹೋಗುತ್ತಿದ್ದ ವೃದ್ಧರೊಬ್ಬರಿಗೆ ಡಿಕ್ಕಿ ಹೊಡೆದಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದ ವಿವರಗಳು:
60 ವರ್ಷದ ವ್ಯಕ್ತಿ ಸೈಕಲ್ ನಲ್ಲಿ ಹೋಗುತ್ತಿದ್ದಾಗ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದ್ದು, ಅವರು ನೆಲಕ್ಕೆ ಬಿದ್ದು, ಬಸ್ ಚಕ್ರ ತಲೆಯ ಮೇಲಿನಿಂದ ಹರಿದಿದೆ. ಗಾಯಗೊಂಡ ವ್ಯಕ್ತಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಅವರು ಅಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.
Also Read: Viral Video: ಹಾಯ್ ಫ್ರೆಂಡ್ಸ್ ಇವತ್ತು ನಮ್ಮ ಫಸ್ಟ್ ನೈಟ್, ಮೊದಲ ರಾತ್ರಿಯ ವಿಡಿಯೋ ಹಂಚಿಕೊಂಡ ನವ ಜೋಡಿ!
महाराष्ट्र के नागपुर में तेज रफ्तार स्कूल बस ने साइकिल सवार बुजुर्ग को कुचल दिया। व्यक्ति की मौत हो गई। #Maharashtra pic.twitter.com/6popvV9Xan
— Versha Singh (@Vershasingh26) July 9, 2024
ಬಸ್ ಚಾಲಕನಿಗಾಗಿ ಹುಡುಕಾಟ:
ಪೊಲೀಸರು ಈ ಬಸ್ ಅನ್ನು ಗುರುತಿಸಿದ್ದು, ಬಸ್ ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. @Vershasingh26 ಎಂಬ ಟ್ವಿಟರ್ ಖಾತೆಯಲ್ಲಿ ಈ ಅಪಘಾತದ ವಿಡಿಯೋ ಹಂಚಿಕೊಳ್ಳಲಾಗಿದ್ದು, ಇದು ಎಲ್ಲೆಡೆ ವೈರಲ್ ಆಗಿದೆ. ಈ ಆಘಾತಕಾರಿ ವಿಡಿಯೋ ಎದೆಯಲ್ಲಿ ನಡುಕ ಹುಟ್ಟಿಸುವಂತಿದೆ.
– With inputs from agencies