ಇಂದಿನಿಂದ LPG ಸಿಲಿಂಡರ್ ಬೆಲೆ ಇಳಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ
ನವದೆಹಲಿ, ಜುಲೈ 01: ಪ್ರಧಾನಿ ನರೇಂದ್ರ ಮೋದಿ 3.0 ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮೊದಲ ಬಾರಿಗೆ ದೇಶದ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ. ಜುಲೈ ತಿಂಗಳ ಮೊದಲ ದಿನವೇ LPG ಗ್ಯಾಸ್ ಸಿಲಿಂಡರ್ಬೆಲೆ ಇಳಿಕೆಯಾಗಿದೆ.
ಇಂದು ಸಿಲಿಂಡರ್ ಬೆಲೆ ಗಣನೀಯವಾಗಿ ಇಳಿಕೆಯಾಗಲಿದೆ ಎಂದು ಕೆಲವರು ಭವಿಷ್ಯ ನುಡಿದಿದ್ದರು. ಆದರೆ, ಬೆಲೆ ಇಳಿಕೆ ಕೇವಲ ವಾಣಿಜ್ಯ ಬಳಕೆಗೆ ಮಾತ್ರ ಸೀಮಿತವಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ಈ ನಿರ್ಧಾರ ತೆಗೆದುಕೊಂಡಿರುವುದರಿಂದ ಜನ ಸಾಮಾನ್ಯರಿಗೆ ನೆಮ್ಮದಿ ಸಿಗಲಿದೆ.
ಸಬ್ಸಿಡಿ ರಹಿತ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಡಿಯನ್ ಆಯಿಲ್ ಪ್ರಕಾರ, ಕೋಲ್ಕತ್ತಾದಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ಬೆಲೆ 829 ರೂಪಾಯಿ ಇದೆ. ದೆಹಲಿ, ಮುಂಬೈ ಮತ್ತು ಚೆನ್ನೈಗಳಲ್ಲಿ ಕ್ರಮವಾಗಿ ರೂ.803, ರೂ.802.5 ಮತ್ತು ರೂ.818.5 ಆಗಿದೆ.
ಕರ್ನಾಟಕ ಮತ್ತು ಬೆಂಗಳೂರಿನಲ್ಲಿ 14.5 ಕೆಜಿ ಡೊಮೆಸ್ಟಿಕ್ ಸಿಲಿಂಡರ್ ಬೆಲೆ 905.5 ರೂಪಾಯಿ ಇದೆ. ವಾಣಿಜ್ಯ ಬಳಕೆಯ 14.5 ಕೆಜಿಯ ಸಿಲಿಂಡರ್ ಬೆಲೆ 1813 ರೂಪಾಯಿ ಇದೆ. ದೆಹಲಿಯಲ್ಲಿ ಪ್ರತಿ ಸಿಲಿಂಡರ್ ಬೆಲೆ 1,646 ರೂಪಾಯಿ ಇದೆ. ಅಂದರೆ, ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 30 ರೂಪಾಯಿ ಇಳಿಕೆಯಾಗಿದೆ. ಮುಂಬೈ ಮತ್ತು ಚೆನ್ನೈಗಳಲ್ಲಿ 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಕ್ರಮವಾಗಿ ರೂ.1,598 ಮತ್ತು ರೂ.1,809.5ಕ್ಕೆ ಇಳಿದಿದೆ. ಈ ಎರಡೂ ನಗರಗಳಲ್ಲಿ 31 ರೂಪಾಯಿ ಇಳಿಕೆಯಾಗಿದೆ.
#Breaking: The rate of 19 KG commercial LPG gas cylinder has been slashed by Rs 30 with effect from today, 1st July.
In Delhi, the retail sale price of 19kg commercial LPG cylinder is Rs 1646 from today.#LPGCylinder #LPG #Delhi #TNCards pic.twitter.com/3jEwvhmncp
— TIMES NOW (@TimesNow) July 1, 2024
ಉಜ್ವಲ ಯೋಜನೆಯಡಿ ಫಲಾನುಭವಿಗಳು 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಅನ್ನು ಸ್ವಲ್ಪ ಕಡಿಮೆ ಬೆಲೆಗೆ ಖರೀದಿಸಬಹುದು. ಅವರಿಗೆ 300 ರೂಪಾಯಿ ಕಡಿಮೆ ಸಿಗುತ್ತದೆ. ಅಂದರೆ, ಕೋಲ್ಕತ್ತಾ, ದೆಹಲಿ, ಮುಂಬೈ ಮತ್ತು ಚೆನ್ನೈಗಳಲ್ಲಿ ಸಬ್ಸಿಡಿ ರಹಿತ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಕ್ರಮವಾಗಿ ರೂ.529, ರೂ.503, ರೂ.502.5 ಮತ್ತು ರೂ.518.5 ಆಗಿದೆ.
Also Read: Jio Recharge: ಬಳಕೆದಾರರಿಗೆ ‘ಜಿಯೋ’ ಶಾಕ್! ರೀಚಾರ್ಜ್ ದರ ಹೆಚ್ಚಳ; ಇಲ್ಲಿದೆ ಹೊಸ ದರಪಟ್ಟಿ
ಇನ್ನು, ಇಂಡಿಯನ್ ಆಯಿಲ್ ಅಥಾರಿಟಿಪ್ರಕಾರ, ಜುಲೈ 1 ರಿಂದ ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1,756 ರೂಪಾಯಿಗೆ ಇಳಿಯಲಿದೆ. ಮೆಟ್ರೋ ನಗರಗಳಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ರೂ.31 ಇಳಿಕೆಯಾಗಿದೆ. ಹೊಸ ಬೆಲೆ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಆದರೆ, 14.2 ಕೆಜಿ ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆ ಬದಲಾಗಿಲ್ಲ.